ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದ್ದು, ಇದೀಗ NIA ಜೊತೆಗೆ ತನಿಖೆಗೆ ಸಹಕರಿಸಲು 9 ಮಂದಿ ಜಿಲ್ಲೆಯ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ.

ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ ಒಒಡಿ ಮೂಲಕ ಬೆಂಗಳೂರು ಎನ್ಐಎ ವಿಭಾಗದ ಅಧಿಕಾರಿಗಳ ಜೊತೆ ಪ್ರಕರಣದ ತನಿಖೆಗಾಗಿ ಜಿಲ್ಲೆಯ 9 ಪೊಲೀಸ್ ಅಧಿಕಾರಿಗಳನ್ನು ಎಡಿಜಿಪಿ ಡಾ.ಎಮ್.ಎ.ಸಲೀಂ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಈ ಒಂದು ಆದೇಶವು ತಕ್ಷಣದಿಂದಲೇ ಬೆಂಗಳೂರಿನ ಎನ್ಐಎ ಕಚೇರಿಗೆ ವರದಿ ಮಾಡಿಕೊಳ್ಳಲು ತಿಳಿಸಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸನ್ನ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ ಉದಯ ರವಿ, ವೇಣೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರವೀಣ್.ಎಮ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರವೀಣ್ ರೈ ಮತ್ತು ಆದ್ರಾಮ, ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಉದಯ ರೈ, ಬಂಟ್ವಾಳ ಸಂಚಾರಿ ಠಾಣೆಯ ವಿವೇಕ್ ರೈ ಮತ್ತು ಕುಮಾರ್, ಸುಳ್ಯ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅನಿಲ್ ಇವರನ್ನು ಒಳಗೊಂಡ ಪೋಲಿಸರ ತಂಡವನ್ನು ಒಂದು ತಿಂಗಳವರೆಗೆ ಎನ್ಐಎಗೆ ಒಒಡಿ ಮೂಲಕ ನೇಮಕ ಮಾಡಲಾಗಿದೆಯೆಂದು ವರದಿಯಾಗಿದೆ.