dtvkannada

'; } else { echo "Sorry! You are Blocked from seeing the Ads"; } ?>

ವಿಜಯಪುರ: PFI,SDPI ಸಂಘಟನೆಯ ದಾಳಿಯ‌ ಕುರಿತು ಮಾತಾನಾಡುತ್ತಾ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ವಿಜಯಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ರಾಜ್ಯದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಹಾಗೂ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಬೆಳೆಯಲು ಕಾರಣವೇ ಸಿದ್ದರಾಮಯ್ಯ.

'; } else { echo "Sorry! You are Blocked from seeing the Ads"; } ?>

ಇವರ ಅವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೇ ಬಂಧಿಸಿದ್ದಾರೆ ಎಂದರು.

ಪಿಎಫ್‍ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ನಮ್ಮ ಸರ್ಕಾರ (BJP Government) ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

'; } else { echo "Sorry! You are Blocked from seeing the Ads"; } ?>

ಪಿಎಫ್‍ಐ ಮೇಲೆ ದಾಳಿ ರಾಜಕೀಯ ಪ್ರೇರಿತ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ರಾಜಕೀಯ (Political) ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು ಎಂದು ಪ್ರಶ್ನಿಸುತ್ತಾ ಮಾತು ನಿಲ್ಲಿಸಿದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!