';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಪಿ.ಎಫ್.ಐ ಮತ್ತು ಅದರ ಎಂಟು ಅಂಗಸಂಸ್ಥೆಗಳ ಮೇಲಿನ ನಿಷೇಧ ಇಲ್ಲಿನ ಸರ್ಕಾರದ ಅಘೋಷಿತ ತುರ್ತು ಪರಿಸ್ಥಿತಿಯ ಬಾಗವಾಗಿದೆ ಎಂದು ಎಸ್.ಡಿ.ಪಿ.ಐ ಹೇಳಿದೆ.
ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿ ಎತ್ತಿದರೂ ಅವರ ವಿರುದ್ಧ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ, ವಾಕ್ ಸ್ವಾತಂತ್ರ್ಯ ಮತ್ತು ಪ್ರತಿಭಟನೆಗಳನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ.
ಇದು ಸಂವಿಧಾನ ಹಕ್ಕುಗಳ ಉಲ್ಲಂಘನೆಯಾಗಿದೆ.
ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಹೋರಾಟದ ಧ್ವನಿಗಳನ್ನು ಅಡಗಿಸುತ್ತಿದೆ, ಇದು ದೇಶದ ತುರ್ತು ಪರಿಸ್ಥಿತಿಯ ಬಾಗವಾಗಿದ್ದು ಇದರ ವಿರುದ್ಧ ಎಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಜನರು ಸರ್ಕಾರದ ಧೋರಣೆ ವಿರುದ್ಧ ಪ್ರತಿರೋಧ ಒಡ್ಡಬೇಕೆಂದು ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಹೇಳಿದರು.