dtvkannada

'; } else { echo "Sorry! You are Blocked from seeing the Ads"; } ?>

ಮೈಸೂರು: ವಿಶ್ವ ವಿಖ್ಯಾತ ದಸರಾ ಉತ್ಸವದಲ್ಲಿ ಕವಿಗೋಷ್ಠಿ ಯಲ್ಲಿ ಬ್ಯಾರಿ ಭಾಷೆಯ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್,ಡಿ ಕುಮಾರಸ್ವಾಮಿ ಹೇಳಿದರು.

ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ.
ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯನುಡಿ.
ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು.
ಬಿಜೆಪಿ ಸರಕಾರದ್ದು ಏಕಪಕ್ಷೀಯ ನಡೆ.

'; } else { echo "Sorry! You are Blocked from seeing the Ads"; } ?>

ಈ ವರ್ಷದ ದಸರಾ ಕವಿಗೋಷ್ಠಿಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಬಾಷೆಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ.
ಆದರೆ, ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ರಾಜ್ಯ ಭಾಜಪ ಸರಕಾರದ ಸಂಕುಚಿತ ಮನೋಭಾವಕ್ಕೆ ಸಾಕ್ಷಿ.

ಏಕಭಾಷೆಯನ್ನು ಮೆರೆಸುವ ಬಿಜೆಪಿ ಪಕ್ಷಕ್ಕೆ ಈ ನೆಲದ ತಾಯಿಭಾಷೆ ಕನ್ನಡವೂ ಸೇರಿ ಇತರೆ ಎಲ್ಲಾ ಉಪಭಾಷೆಗಳನ್ನು ಅಳಿಸಿಹಾಕಬೇಕೆಂಬ ಕೆಟ್ಟ ಮನಃಸ್ಥಿತಿ ಇರುವಂತಿದೆ.

'; } else { echo "Sorry! You are Blocked from seeing the Ads"; } ?>

ಇದು ಖಂಡಿತಾ ನಡೆಯುವುದಿಲ್ಲ ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ಬ್ಯಾರಿ ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ಅನುಮೋದನೆ ನೀಡಿದ್ದೆ ಬ್ಯಾರಿ ಅಕಾಡೆಮಿಯ ಮೂಲಕ ಅತ್ಯುತ್ತಮ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುತ್ತಿವೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನೂ ಸ್ಥಾಪಿಸಲಾಗಿದೆ. ವಿಶೇಷವೆಂದರೆ, ಬ್ಯಾರಿ ಭಾಷಿಗರು ಕನ್ನಡ ಲಿಪಿಯನ್ನೇ ಬಳಸಿ ಅತ್ಯುತ್ತಮ ಕೃತಿಗಳನ್ನು ರಚಿಸಿದ್ದು, ಅವುಗಳಲ್ಲಿ ಕೆಲ ಕೃತಿಗಳು ಕನ್ನಡಕ್ಕೂ ಅನುವಾದಿಸಲ್ಪಟ್ಟಿವೆ.

ವಚನ ಸಾಹಿತ್ಯ ಸೇರಿ ಅನೇಕ ಕನ್ನಡದ ಅಮೂಲ್ಯ ಕೃತಿಗಳು ಬ್ಯಾರಿಗೂ ಅನುವಾದಗೊಂಡಿವೆ.
ಕನ್ನಡ ನೆಲದಲ್ಲಿ ಕನ್ನಡ ಲಿಪಿಯೊಂದಿಗೆ ಸಾಮರಸ್ಯದ ಭಾಷೆಯಾಗಿ ಬೆರೆತಿರುವ ಬ್ಯಾರಿ ಭಾಷೆಗೆ ಈ ವರ್ಷ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ.
ರಾಜ್ಯ ಸರಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಪಡಿಸಿದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!