dtvkannada

'; } else { echo "Sorry! You are Blocked from seeing the Ads"; } ?>

ಹಾಸನ: ಸ್ವಾಮಿ ಮಂಜುನಾಥನ ದರ್ಶನ ಪಡೆದುಕೊಂಡು ಇನ್ನೇನು ಮನೆ ಸೇರಬೇಕು ಎನ್ನುವಷ್ಟರಲ್ಲೇ ಜವರಾಯ ಅಟ್ಟಹಾಸ ಮೆರೆದಿದ್ದು, 9 ಮಂದಿ ದುರ್ಮರಣ ಹೊಂದಿದ್ದಾರೆ. ಮೃತರದಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ. ಕೆಎಸ್​ಆರ್​ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್​ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ.

ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥನ ಮುಂದೆ ತಮ್ಮ ಕಷ್ಟ-ಕಾರ್ಪಣ್ಯಗಳನ್ನು ಹೇಳಿಕೊಂಡು ಆಶೀರ್ವಾದ ಪಡೆದು ಅಲ್ಲಿಂದ ವಾಪಸ್ ಆಗಿದ್ದರು. ಇನ್ನೇನು ಐದಾರು ಕಿಲೋಮೀಟರ್​ನಲ್ಲಿ ಮನೆಗೆ ಸೇರೋ ಮೊದಲೇ ಈ ದುರಂತ ಸಂಭವಿಸಿದೆ.

'; } else { echo "Sorry! You are Blocked from seeing the Ads"; } ?>

ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಘೋರ ದುರಂತ ಸಂಭವಿಸಿದ್ದು, ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಗಿಲು ಮುಟ್ಟಿದ ಆಕ್ರಂದನ

'; } else { echo "Sorry! You are Blocked from seeing the Ads"; } ?>

ಅರಸೀಕೆರೆ ಶವಾಗಾರದ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ನಾಲ್ವರು ಪುಟ್ಟ ಮಕ್ಕಳು ಮೃತಪಟ್ಟಿರುವುದು ಎಂಥವರ ಮನಸ್ಸನ್ನೂ ಕರಗಿಸುತ್ತಿದೆ. ಪುಟ್ಟ ಮಕ್ಕಳ ಮೃತದೇಹ ಕಂಡವರು ಬಿಕ್ಕಿಬಿಕ್ಕಿ ಅಳುತ್ತದ್ದಾರೆ. ನಿನ್ನೆ-ಮೊನ್ನೆಯವರೆಗೂ ಮನೆಯಂಗಳದಲ್ಲಿ ಆಡಿಕೊಂಡಿದ್ದ ಪುಟಾಣಿಗಳು ಎರಡು ದಿನಗಳ ಹಿಂದಷ್ಟೇ ಹಬ್ಬ ಮುಗಿಸಿ ಧರ್ಮಸ್ಥಳಕ್ಕೆ ಹೋಗಿದ್ದರು. ಈಗ ನೋಡಿದರೆ ಹೆಣಗವಾಗಿ ವಾಪಸ್ ಬಂದಿದ್ದಾರೆ ಎಂದು ಸಂಬಂಧಿಕರು ಒಂದೇ ಸಮನೆ ಅಳುತ್ತಿದ್ದಾರೆ.

ಒಂದೇ ಗ್ರಾಮದ 7 ಜನ ಸಾವು

ಅಪಘಾತದಲ್ಲಿ ಮೃತಪಟ್ಟ 9 ಜನರ ಪೈಕಿ 7 ಮಂದಿ ಸಾಲಾಪುರ ಗ್ರಾಮಕ್ಕೆ ಸೇರಿದವರು. ಇತರ ಇಬ್ಬರು ದೊಡ್ಡೇನಹಳ್ಳಿ ಗ್ರಾಮದವರು. ಧರ್ಮಸ್ಥಳ, ಸುಬ್ರಹ್ಮಣ್ಯ, ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೊಡ್ಡೇನಹಳ್ಳಿಯ ಮಕ್ಕಳಾದ ಧ್ರುವ (2) ಹಾಗೂ ತನ್ಮಯ್ (10), ಸಾಲಾಪುರದ ಲೀಲಾವತಿ (50), ಚೈತ್ರಾ (33), ಸಮರ್ಥ (10) ಡಿಂಪಿ (12), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತರು.

ಒಂದೇ ಕುಟುಂಬದ ಸದಸ್ಯರು

ದಸರಾ ರಜೆಯ ಹಿನ್ನೆಲೆಯಲ್ಲಿ ಅಣ್ಣ-ತಮ್ಮಂದಿರ ಕುಟುಂಬದ ಸದಸ್ಯರು ಒಂದೇ ವಾಹನದಲ್ಲಿ ಧಾರ್ಮಿಕ ಪ್ರವಾಸ ಹೋಗಿಧ್ದರು. ಅಪಘಾತದಲ್ಲಿ ದೊಡ್ಡಯ್ಯ ಹಾಗೂ ಪತ್ನಿ ಭಾರತಿ ಮೃತಪಟ್ಟಿದ್ದಾರೆ. ದೊಡ್ಡಯ್ಯ ಅವರ ಸಹೋದರ ರಮೇಶ್, ಅವರ ಪತ್ನಿ ಲೀಲಾವತಿ ಮತ್ತು ಮೊಮ್ಮಕ್ಕಳಾದ ಧ್ರುವ ಮತ್ತು ತನ್ಮಯ್ ಸಹ ಮೃತಪಟ್ಟಿದ್ದಾರೆ. ಈ ಇಬ್ಬರೂ ಮಕ್ಕಳ ತಾಯಿ ಮಂಜುಳಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟಿಟಿ ವಾಹನ ಚಲಾಯಿಸುತ್ತಿದ್ದ ದೊಡ್ಡಯ್ಯ ಅವರ ಪುತ್ರ ಶಶಿಕುಮಾರ್ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೊಡ್ಡಯ್ಯ ಅವರ ಮತ್ತೊಬ್ಬ ಸಹೋದರ ಕುಮಾರಸ್ವಾಮಿ ಅವರ ಪುತ್ರಿ ಚೈತ್ರಾ ಮತ್ತು ಚೈತ್ರಾ ಅವರ ಮಕ್ಕಳಾದ ಸಮರ್ಥ ಎಸ್.ರಾಯ್ ಮತ್ತು ಸೃಷ್ಟಿ ಕೂಡ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ ಅವರ ಬಾವಮೈದುನನ ಮಗಳು ವಂದನಾ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಸಾಲಾಪುರದ ಏಳು ಹಾಗೂ ದೊಡ್ಡೇನಹಳ್ಳಿಯ ಇಬ್ಬರು ಸೇರಿದ್ದಾರೆ. ರಮೇಶ್ ಪುತ್ರಿ ಮಂಜುಳಾರನ್ನು ದೊಡ್ಡೇನಹಳ್ಳಿಯ ಸಂತೋಷ ಜೊತೆ ಮದುವೆ ಮಾಡಿಕೊಡಲಾಗಿತ್ತು.

ತಾಯಿ ಜೊತೆ ಮಕ್ಕಳೊಂದಿಗೆ ಧಾರ್ಮಿಕ ಕ್ಷೇತ್ರದ ದರ್ಶನಕ್ಕೆ ಮಂಜುಳಾ ತೆರಳಿದ್ದರು. ಅಪಘಾತದಲ್ಲಿ ಮಂಜುಳಾರ ತಾಯಿ ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ ಪುತ್ರಿ ಚೈತ್ರಾ ಅವರ ಪತಿ ಶ್ರೀನಿವಾಸ್ ಎರಡು ವರ್ಷಗಳ ಹಿಂದಷ್ಟೇ ಕೊವಿಡ್​ನಿಂದ ಮೃತಪಟ್ಟಿದ್ದರು. ಸಾರಿಗೆ ಇಲಾಖೆಯಲ್ಲಿ ಶ್ರೀನಿವಾಸ್ ಅವರ ಕೆಲಸವನ್ನು ಅನುಕಂಪದ ಆಧಾರದ ಮೇಲೆ ಚೈತ್ರಾ ಅವರಿಗೆ ಕೊಡಲಾಗಿತ್ತು. ಮುಂದಿನ ವಾರ ಅವರು ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅದಕ್ಕೆ ಮೊದಲೇ ಅವರು ಮಕ್ಕಳ ಸಹಿತ ಮೃತಪಟ್ಟಿದ್ದಾರೆ.

ಸಿಎಂ ವಿಷಾದ

ಅಪಘಾತದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!