ಪುತ್ತೂರು : ಅಮಾಯಕ ವ್ಯಾಪಾರಿಗಳಿಬ್ಬರ ಮೇಲೆ ಮಾರಣಾಂತಿಕ ಗುಂಪು ಹಲ್ಲೆ ನಡೆಸಿದ ಆರೋಪಿಗಳ ಬಂಧನದಲ್ಲಿ ಮೀನಮೇಷ ನಡೆಸುತ್ತಿರುವ ಇಲಾಖೆಯ ತಾರತಮ್ಯ ನೀತಿಯ ವಿರುದ್ಧ, ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿ ನಡೆಸುತ್ತಿರುವ ಆಕ್ರಮಣದ ವಿರುದ್ಧ ದ.ಕ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಇದರ ವತಿಯಿಂದ ಬೃಹತ್ ಪ್ರತಿಭಟನೆ ಹಾಗೂ ಖಂಡನಾ ಸಭೆ ಇಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದ.ಕ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆಗೆ ವಿವಿಧ ಸಂಘಟನೆಗಳ ಬೆಂಬಲ
ಇದೀಗಾಗಲೇ ಮುಸ್ಲಿಂ ಯುವಜನ ಪರಿಷತ್ ಕರೆಕೊಟ್ಟಿರುವ ಪ್ರತಿಭಟನೆಗೆ ವಿವಿಧ ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (SSF) ಸುನ್ನೀ ಯುವಜನ ಸಂಘ (SYS) SKSSF, ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು SDPI ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ಯಶಸ್ವಿಗೆ ಕರೆ ನೀಡಿದೆ.
ಸುಮಾರು ಐದು ಸಾವಿರಕ್ಕೂ ಮಿಕ್ಕ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬೀಡು ಬಿಟ್ಟಿದ್ದಾರೆ.