';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಕುಂದಾಪುರ: ಎಂಟನೆ ತರಗತಿಯ ವಿದ್ಯಾರ್ಥಿಯೊರ್ವಳು ಶಾಲಾ ಪಠ್ಯ ಪುಸ್ತಕ ಓದುತ್ತಿದ್ದ ಸಂಧರ್ಭದಲ್ಲಿ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಮೃತಪಟ್ಟ ಬಾಲಕಿಯು ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ(13) ಎಂದು ತಿಳಿದು ಬಂದಿದೆ.
ಅನುಶ್ರೀಯು ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದು ನಿನ್ನೆ ಮನೆಯಲ್ಲಿ ಓದುತ್ತಿದ್ದಂತೆ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಳೆಂದು ವರದಿಯಾಗಿದೆ.
ಆ ತಕ್ಷಣವೇ ಈಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲಾಗಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀಯ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಬಿಟ್ಟುಕೊಡಲಾಗಿದೆ.