';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು : ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ. ಭಟ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸಂದೇಶ ರವಾನಿಸಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ. ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಭಾಸ್ಕರ ಮಣಿಯಾಣಿ ಎಂಬಾತ ವೀಣಾ ಭಟ್ ಅವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಾಮೆಂಟ್ ಅನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದ. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಾಮೆಂಟ್ ಅನ್ನು ಅಳಿಸಿ ಹಾಕಿಸಿದ್ದಾರೆ.
ಬಳಿಕ ಆರೋಪಿಯನ್ನು ದೂರುದಾರರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು, ಕ್ಷಮೆ ಕೇಳಿದ ಬಳಿಕ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.