dtvkannada

ಸುಬ್ರಹ್ಮಣ್ಯ: ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿರುವುದರ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿರುವ ಮಹಿಳೆಯು ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂದು ತಿಳಿದು ಬಂದಿದೆ.

ಭಾರತಿಯವರು ಅಕ್ಟೋಬರ್ 29ರಂದು ಕಾಣೆಯಾಗಿದ್ದಾರೆ. ಈ ಬಗ್ಗೆ ಭಾರತಿ ಅವರ ಪತಿ ದೂರು ನೀಡಿದ್ದಾರೆ.ಅಕ್ಟೋಬರ್ 29 ರಂದು ಸಂಜೆ ಮನೆಗೆ ಬಂದಾಗ ಭಾರತಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

ತನ್ನ ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್‌ ಸ್ವೀಚ್‌ ಆಫ್‌ ಬರುತ್ತಿತ್ತು ಎನ್ನಲಾಗಿದೆ.

ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!