';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪಾಕಿಸ್ತಾನ: ಪಾಕ್ ಸರ್ಕಾರದ ವಿರುದ್ಧ ಇಸ್ಲಾಮ್ ಬಾದ್ ಗೆ ಪ್ರತಿಭಟನೆಗೆ ತೆರಳುತ್ತಿದ್ದ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಇಮ್ರಾನ್ ಖಾನ್ ನ ಕಾಲಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಇಮ್ರಾನ್ ಖಾನ್ ರವರ ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿ ತನ್ನ ಬೆಂಗಾವಲು ವಾಹನಕ್ಕೆ ದಾಳಿ ನಡೆದಿದ್ದು ವಾಹನದಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ.
ಘಟನೆಯಲ್ಲಿ ಪಾಕ್ ಮಾಜಿ ಪ್ರಧಾನಿ ಮತ್ತು ಪಾಕ್ನ ಮಾಜಿ ಆಟಗಾರರಾದ ಇಮ್ರಾನ್ ಖಾನ್ ಗಾಯಗೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಮ್ರಾನ್ ಖಾನ್ ಸಾಗಿಸುತ್ತಿದ್ದ ಕಂಟೈನರ್-ಮೌಂಟೆಡ್-ಟ್ರಕ್ ಮೇಲೆ ಗುಂಡಿನ ದಾಳಿ ನಡೆದಿದೆ.
ಇಮ್ರಾನ್ ಖಾನ್ ಕಾಲಿಗೆ ಗುಂಡು ತಗುಲಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಅವರನ್ನು ಇಮ್ರಾನ್ ಖಾನ್ ಅವರನ್ನು ಲಾಹೋರ್‌ನ ಶೌಕತ್ ಖಾನಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.