';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.
ಬೆಳ್ಳಾರೆಯಲ್ಲಿ ಶನಿವಾರ ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಬಾಗೂ ಇಬ್ರಾಹಿಂ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಾಫಿ ಬೆಳ್ಳಾರೆ ಎಸ್’ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದು, ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ ಹಾಗೂ ಸುಳ್ಯದ ಇಬ್ರಾಹಿಂ ಸೇರಿ ಶನಿವಾರ ಮುಂಜಾನೆ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ.
ಬುಧವಾರ ಮುಂಜಾನೆ ಜಿಲ್ಲೆಯ ಹಲವು ಕಡೆ ಪಿಎಫ್ ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.