ಉಳ್ಳಾಲ: ಹರೇಕಳ ಜನತೆಗೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಈ ಮೂಲಕ ಗೌರವ ನೀಡಲಾಗಿದೆ ಎನ್ನಲಾಗಿದೆ.
ಇಲ್ಲಿ ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ.
ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ ಉದ್ಘಾಟನೆ ಹಂತಕ್ಕೆ ತಲುಪಲಿದೆ. ಕಟ್ಟಡದ ಒಂದು ಅಂತಸ್ತಿನ ಗೋಡೆ ಪೂರ್ತಿ ಹರೇಕಳ ಹಾಜಬ್ಬ ಅವರ ಚಿತ್ರವನ್ನು ರಚಿಸಲಾಗಿದ್ದು ನೋಡಲು ಕೂಡ ಮನಮೋಹಕವಾಗಿದೆ.
ಈ ಬಗ್ಗೆ ಮಾತನಾಡಿದ ಗ್ರಾಮ
ಪಂಚಾಯತ್ ಅಧ್ಯಕ್ಷ ಬದ್ರುದ್ದೀನ್ ಹರೇಕಳ ಗ್ರಾಮದ ಹೆಸರನ್ನು ಇಡೀ ಜಗತ್ತಿಗೆ ಪಸರಿಸಿದವರು ತಾನು ಕಿತ್ತಳೆ ಹಣ್ಣು ಮಾರಿ ತನ್ನೂರಿನಲ್ಲಿ ಶಾಲೆ ಕಟ್ಟಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ ಶ್ರೇಷ್ಟ ರಾಗಿದ್ದಾರೆ ಇವರು ಗ್ರಾಮಕ್ಕೆ ವಿಶೇಷ ಗೌರವ ಅವರಿಂದಲೇ ಬಂದಿದೆ. ಅದು ಅಲ್ಲದೇ ದೇಶದ ಅತ್ಯುನ್ನತ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದವರು.
ಆದ್ದರಿಂದ ಗ್ರಾಮದ ಸರ್ವ ಸದಸ್ಯರ ನಿರ್ಣಯದಂತೆ ಕಟ್ಟಡದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಚಿತ್ರ ರಚಿಸಲಾಗಿದೆ’ ಎಂದು ತಿಳಿಸಿದರು.