ಪುತ್ತೂರು: ಹೇಮನಾಥ್ ಶೆಟ್ಟಿಯ ಹೇಳಿಕೆ ಪ್ರಕಾರ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ(ಹೇಮನಾಥ ಶೆಟ್ಟಿಗೆ) ಎಂದು ಶಕುಂತಲಾ ಶೆಟ್ಟಿ ಹೇಳಿದ್ದಾರಲ್ಲದೆ ಈ ಮಾತನ್ನು ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಹೇಳಿದ್ದಾರೆ’ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕಾವು ಹೇಮನಾಥ ಶೆಟ್ಟಿ ಹೇಳಿದ್ದಾರೆ.
ಈ ಬಗ್ಗೆ ಪುತ್ತೂರಿನಲ್ಲಿ ಮಾತಾಡಿದ ಅವರು ‘ಮಾಜಿ ಶಾಸಕಿ ಶಕುಂತಲಾ ಶೆಟ್ಟಿಗಾಗಿ ನಾನು ಹಲವು ಬಾರಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ ಇದು ಎಲ್ಲರಿಗೂ ತಿಳಿದಿರುವ ವಿಚಾರ.
ಈ ಬಾರಿ ಪಕ್ಷದ ಆಂತರಿಕ ಸಮಿಕ್ಷೆಯಲ್ಲಿ ನನ್ನ ಹೆಸರೇ ಮುಂದಿದೆ, ಈ ಬಾರಿ ಪಕ್ಷ ನನ್ನನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸಲಿದೆ, ಕಳೆದ ಚುನಾವಣೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರಿಗೆ ಅಭ್ಯರ್ಥಿ ಸ್ಥಾನ ಬಿಟ್ಟುಕೊಟ್ಟಿದ್ದು ಇದರಿಂದಾಗಿ ಈ ಬಾರಿ ಅವರು ನನಗೆ ವಿರೋಧ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ವಿಧಾನಸಭಾ ಚುನಾವಣೆಯ ಬಿಸಿ ಇತ್ತೀಚೆಗೆ ಎಲ್ಲಾ ರಾಜಕೀಯ ವ್ಯಕ್ತಿಗಳನ್ನು, ಸ್ಥಾನ ಆಕಾಂಕ್ಷಿಗಳನ್ನು ತಟ್ಟುತ್ತಲೇ ಇದೆ. ಚುನಾವಣೆ ಘೋಷಣೆ ಮೊದಲೇ ಪುತ್ತೂರಿನಲ್ಲಿ ಅಭ್ಯರ್ಥಿತನಕ್ಕಾಗಿ ಪೈಪೋಟಿ ಆರಂಭವಾಗಿದೆ.
ಕಾಂಗ್ರೇಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು 10 ಮಿಕ್ಕಿದ ಅರ್ಜಿಗಳು ಸಲ್ಲಿಕೆಯಾಗಿದೆ. ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದಿವ್ಯಪ್ರಭಾ ಗೌಡ, ಎಂ.ಬಿ.ವಿಶ್ವನಾಥ ರೈ, ಭರತ್ ಮುಂಡೋಡಿ, ಸತೀಶ್ ಕೆಡಿಂಜೆ ಮೊದಲಾದವರಿಂದ 2 ಲಕ್ಷ ನೀಡಿ ಅಭ್ಯರ್ಥಿತನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.