dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು ಶಾಲಾ ಕಾಲೇಜು ತೆರಳುವ ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರಿಗೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಅಲ್ಲಿನ ಗ್ರಾಮ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಉಪ್ಪಿನಂಗಡಿ ಪೇಟೆ ಪಂಚಾಯತ್ ವ್ಯಾಪ್ತಿಯಲ್ಲಿ ಅತೀ ಹೆಚ್ಚು ದಿನವಹಿ ಮಾರುಕಟ್ಟೆಗಾಗಿ ಜನರಿಂದ ತುಂಬಿ ತುಳುಕುವ ಪೇಟೆಯಾಗಿದೆ.

'; } else { echo "Sorry! You are Blocked from seeing the Ads"; } ?>

ಪೇಟೆಗೆ ಬರುವ ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರಿಗೆ ನಡೆದಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಬೀದಿ ನಾಯಿಗಳು ಬೀಡು ಬಿಟ್ಟಿವೆ.ಹಿಂಡು ಹಿಂಡಾಗಿ ನಾಯಿಗಳು ಸಂಚರಿಸುತ್ತಿದ್ದು ಶಾಲೆ ಕಾಲೇಜಿಗೆಂದು ಹೋಗುವ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲು ಸಾಧ್ಯವಿದೆ.

ಈ ಬಗ್ಗೆ ಅಂಗಡಿ ಮಾಲಕರು ಸಹಿತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!