';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
IPL2023: ಐಪಿಎಲ್ 2023 ರ ಮಿನಿ ಹರಾಜು ಪ್ರಾರಂಭವಾಗಿದ್ದು, 10 ಫ್ರಾಂಚೈಸಿಗಳು ತಮ್ಮ ತಂಡವನ್ನು ಪೂರ್ಣಗೊಳಿಸಲು ಇಂದು ಹರಾಜಿಗೆ ಎಂಟ್ರಿಕೊಟ್ಟಿವೆ.
ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಕರನ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ಎಸ್ಆರ್ಹೆಚ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು.
ಆದರೆ ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ. ನೀಡುವ ಮೂಲಕ ಸ್ಯಾಮ್ ಕರನ್ ಅವರನ್ನು ತಮ್ಮದಾಗಿಸಿಕೊಂಡಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ ಸ್ಯಾಮ್ ಕರನ್ ಪಾಲಾಗಿದೆ.
2021 ರ ಹರಾಜಿನಲ್ಲಿ ಕ್ರಿಸ್ ಮೋರಿಸ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡವು 16.25 ಕೋಟಿಗೆ ಖರೀದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 18.50 ಕೋಟಿಗೆ ಹರಾಜಾಗುವ ಮೂಲಕ ಸ್ಯಾಮ್ ಕರನ್ ಐಪಿಎಲ್ನ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ.