ಕೊಪ್ಪಳ: ಎಂಟನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂತ್ರಸ್ತೆ ವಿದ್ಯಾರ್ಥಿನಿಯ ದೇಹದಲ್ಲಿ ಕಂಡುಬಂದ ಕೆಲ ಬದಲಾವಣೆಗಳಿಂದ ಪೋಷಕರಿಗೆ ಅನುಮಾನ ಬಂದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆಗೊಳಪಡಿಸಿದ್ದಾರೆ. ಬಳಿಕ ವರದಿಯಲ್ಲಿ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ಆದ್ರೆ, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ವೈದ್ಯಕೀಯಲ್ಲಿ ಪರೀಕ್ಷೆಯಲ್ಲಿ ಆಕೆ ಗರ್ಭಿಣಿಯಾಗಿರುವ ವಿಷಯ ಪೋಷಕರಿಗೆ ಗೊತ್ತಾಗುತ್ತಿದ್ದಂತೆಯೇ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಲ್ಲದೇ ಅತ್ಯಾಚಾರ ಎಸಗಿದವ ಯಾರ ಮುಂದೆಯೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.