ಕಾಸರಗೋಡು: ಯುವತಿಯೊಬ್ಬಳು ತನ್ನ ಒಳ ಉಡುಪಿನಲ್ಲಿ ಅಕ್ರಮವಾಗಿ ಭಾರಿ ಮೊತ್ತದ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ವೇಳೆ ಕೇರಳ ಪೊಲೀಸರು ವಶಪಡಿಸಿಕೊಂಡ ಬಗ್ಗೆ ವರದಿಯಾಗಿದೆ.
ಯುವತಿಯಿಂದ ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ಒಂದು ಕೋಟಿ ರೂ. ಎಂದು ಅಂದಾಜಿಸಲಾಗಿದ್ದು ಈ ಸಂಬಂಧ ಕಾಸರಗೋಡಿನ 19 ವರ್ಷದ ಯುವತಿಯನ್ನು ಬಂಧಿಸಲಾಗಿದ್ದು ಕಲ್ಲಿಕೋಟೆ ಕರಿಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಈ ಒಂದು ಘಟನೆಯಲ್ಲಿ ಬಂಧಿತಳಾದವಳು ಸೆಹಲಾ(೧೯) ಎಂದು ಗುರುತಿಸಲಾಗಿದೆ.
ಯುವತಿಯ ದೇಹದಲ್ಲಿರುವ ಒಳಉಡುಪುವಿನಲ್ಲಿ ಬರೋಬ್ಬರಿ 1.884 ಕಿಲೋ ಚಿನ್ನಾಭರಣವು ಇದ್ದು ಅದನ್ನು ವಶಪಡಿಸಿಕೊಳ್ಳಲಾಗಿದ್ದು, ಮೂರು ಪ್ಯಾಕೆಟ್ ಗಳನ್ನು ಮಾಡಿ ಒಳ ಉಡುಪುನಲ್ಲಿ ಚಿನ್ನವನ್ನು ಹೊಲಿದು ಸಾಗಾಟ ಮಾಡುತ್ತಿದ್ದಳೆಂದು ಬಂಧನದ ವೇಳೆ ತಿಳಿದು ಬಂದಿದೆ.
ಭಾನುವಾರ ರಾತ್ರಿ ದುಬಾಯಿಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು.
ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಈಕೆಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನದ ಪ್ರಕರಣ ಪತ್ತೆಯಾಗಿದೆ.
ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡಿರಲಿಲ್ಲ.
ಲಗೇಜ್ ತಪಾಸಣೆ ನಡೆಸಿದರೂ ಚಿನ್ನಾಭರಣ ಪತ್ತೆಯಾಗಲಿಲ್ಲ. ಕೊನೆಗೆ ದೇಹ ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದ್ದು, ಕೂಡಲೇ ಆಕೆಯನ್ನು ಬಂಧಿಸಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.