ಚಂಡೀಗಢ: ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಚಂಡೀಗಢದಲ್ಲಿ ನಡೆದಿದೆ.
ಗಾಯಗೊಂಡಿರುವ ಯುವತಿಯನ್ನು ತೇಜಶ್ವಿತಾ ಎಂದು ಗುರುತಿಸಲಾಗಿದೆ.
ಈ ಆಘಾತಕಾರಿ ಘಟನೆ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ.
ಹಿಟ್ ಅಂಡ್ ರನ್ ಪ್ರಕರಣ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 25 ವರ್ಷದ ಯುವತಿಯೊಬ್ಬಳು ತನ್ನ ಮನೆಯ ಬಳಿ ಬೀದಿ ನಾಯಿಗೆ ಆಹಾರ ನೀಡುತ್ತಿದ್ದಾಗ ಕಾರೊಂದು ಬಂದು ಡಿಕ್ಕಿ ಹೊಡೆದಿದೆ, ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಹೋಗಿದ್ದಾನೆ. ಅವರ ತಲೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಕುಟುಂಬದವರ ಪ್ರಕಾರ, ಶನಿವಾರ ರಾತ್ರಿ ತೇಜಶ್ವಿತಾ ಮತ್ತು ಆಕೆಯ ತಾಯಿ ಮಂಜಿದರ್ ಕೌರ್ ಫುಟ್‌ಪಾತ್‌ನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ತೇಜಶ್ವಿತಾ ನಾಯಿಗೆ ಆಹಾರ ನೀಡುತ್ತಿರುವುದನ್ನು ಕಾಣಬಹುದು. ಮಹೀಂದ್ರ ಥಾರ್ SUV ಕಾರು ರಸ್ತೆಯಲ್ಲಿ ಬದಿಗೆ ಬರುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಎಸ್‌ಯುವಿ ಯು-ಟರ್ನ್ ಕಾರು ಯುವತಿಗೆ ಹೊಡೆದು ಹೋಗಿದೆ, ತೇಜಶ್ವಿತಾ ಅಲ್ಲಿಯೇ ನರಳುವುದು ಕೂಡ ವಿಡಿಯೊದಲ್ಲಿ ರೆಕಾರ್ಡ್ ಆಗಿದೆ.
ತೇಜಶ್ವಿತಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಾಯಿ ಗಾಬರಿಗೊಂಡಿದ್ದಾರೆ. ಯಾರೂ ಸಹಾಯಕ್ಕೆ ಬಂದಿಲ್ಲ ಎಂದು ತೇಜಶ್ವಿತಾ ತಾಯಿ ಹೇಳಿದ್ದಾರೆ. ನಂತರ ಮನೆಗೆ ಮತ್ತು ಪೊಲೀಸ್ರಿಗೆ ಕರೆ ಮಾಡಿದ್ದಾರೆ. ತೇಜಶ್ವಿತಾ ಅವರ ತಂದೆ ಓಜಸ್ವಿ ಕೌಶಲ್ ಅವರು ನಾಗರಿಕ ಸೇವಾ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದರು. ಬೀದಿನಾಯಿಗಳಿಗೆ ಆಹಾರ ನೀಡಲು ಪ್ರತಿನಿತ್ಯ ತನ್ನ ತಾಯಿಯೊಂದಿಗೆ ಹೋಗುತ್ತಿದ್ದಳು ಎಂದು ಅವರು ಹೇಳಿದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಾಹನ ಹಾಗೂ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯು ಇಂತಹ ಘಟನೆಗಳು ನಡೆದಿದೆ. ಇದೀಗ ಇಂತಹ ಘಟನೆಗಳು ಹೆಚ್ಚಾಗಿದೆ. ಇವುಗಳಲ್ಲಿ ಪ್ರಮುಖವಾದುದೆಂದರೆ ದೆಹಲಿಯ ಕಾರ್ ಭಯಾನಕ ಪ್ರಕರಣ, ಇದರಲ್ಲಿ 20 ವರ್ಷದ ಯುವತಿಯೊಬ್ಬಳನ್ನು ಕಾರಿನ ಕೆಳಗೆ ಕಾಲು ಸಿಲುಕಿಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗಿ ಸಾವನ್ನಪ್ಪಿದಳು.