dtvkannada

'; } else { echo "Sorry! You are Blocked from seeing the Ads"; } ?>

ಮುಂಬೈ: ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್-ಕಾರು ಮುಖಾಮುಖಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

ನಸುಕಿನ 5 ಗಂಟೆ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 4 ವರ್ಷದ ಮಗುವಿನ ಜೀವ ಪವಾಡಸದೃಢ ರೀತಿಯಲ್ಲಿ ಉಳಿದುಕೊಂಡಿದೆ. ಆಕೆಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮುಂಬೈ-ಗೋವಾ ಹೆದ್ದಾರಿಯ ಮೂಲಕ ಇವರು ರತ್ನಗಿರಿಗೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮಹಾರಾಷ್ಟ್ರದ ರಾಯಗಡ ಜಿಲ್ಲೆ ಮಂಗಾವ್ ತಾಲ್ಲೂಕಿನ ರೆಪೋಳಿ ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಮತ್ತು ಐವರು ಪುರುಷರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!