';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರಿನ ಇಬ್ರಾಹಿಂ ಖಲೀಲ್ ಅವರಿಗೆ ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2020ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಗಿರಿಧರ ಪ್ರಶಸ್ತಿ ನೀಡಲಾಗಿದೆ.
ಪುತ್ತೂರು ತಾಲೂಕಿನ ಬನ್ನೂರು ನಿವಾಸಿಯಾಗಿರುವ ಇವರು ಪ್ರಸ್ತುತ ವಾರ್ತಾ ಭಾರತಿ ದಿನಪತ್ರಿಕೆಯಲ್ಲಿ ವಿಡಿಯೋ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವಿಜಯಪುರದಲ್ಲಿ ನಡೆಯುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.