ಕಾರ್ಕಳ: ಅಣ್ಣನೊಬ್ಬ ಒಡಹುಟ್ಟಿದ ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವ ದಹನವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚರೀಪೇಟೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮುಂಡೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಎಂದು ತಿಳಿದು ಬಂದಿದೆ.
ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಕೃಷ್ಣ ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಕೃಷ್ಣ ಬರೆದಿದ್ದ ಎನ್ನಲಾದ ಡೆತ್ ನೋಟ್ ಕೂಡ ಸಿಕ್ಕಿದೆ.

ಕೃಷ್ಣ ಸಫಲಿಗ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಂಹದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
