dtvkannada

Category: ಜಿಲ್ಲೆ

ಇಂದು ಸಂಜೆ 7ರ ನಂತರ ಬೀಚ್ ಗಳಿಗೆ ಪ್ರವೇಶ ನಿಷೇಧ: ದ.ಕ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಇಂದು (ಡಿ.31) ರಾತ್ರಿ 7 ಗಂಟೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು,…

ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸ್ಥಳಿಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ…

ಸಕಲೇಶಪುರ: ಶಿರಾಡಿ ಘಾಟಿ ಬಳಿ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಸಕಲೇಶಪುರ: ಅಪರಿಚಿತ ಮಹಿಳೆಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಕಲೇಶಪುರದ ಶಿರಾಡಿ ಘಾಟಿ ಬಳಿ ನಡೆದಿದೆ. ಮಹಿಳೆಯ ಶವವು ಕೊಳೆತು ಹೋಗಿರುವುದರಿಂದ ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಜನರು ಅಭಿಪ್ರಾಯಪಟ್ಟಿದ್ದಾರೆ. ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು,…

ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ವ್ಯಕ್ತಿ…

ಕುಡಿದ ಅಮಲಿನಲ್ಲಿ ದಾರಿ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸಿದ್ದ ಚಾಲಕ: ರೋಗಿ ಸಾವು

ಮೈಸೂರು: ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಅರ್ಧ ದಾರಿಯಲ್ಲಿ ನಿಲ್ಲಿಸಿ, ಆಂಬುಲೆನ್ಸ್ ಒಳಗಿದ್ದ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಹಾಸನದ ಸಿದ್ದಾಪುರ ಗ್ರಾಮದ ತೀರ್ಥಾನಂದ(30) ಮೃತಪಟ್ಟವರು. ತೀರ್ಥಾನಂದ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಪೋಷಕರು ಆತನನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ…

ಕರ್ನಾಟಕದಲ್ಲಿ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ – ಡಾ|ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಇಂದು (ಡಿ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.…

ಹೆಚ್ಚಿದ ಒಮೈಕ್ರಾನ್ ಸೋಂಕು: ನಾಳೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಿರುವ ಸಿ.ಎಂ ಬೊಮ್ಮಾಯಿ!

ಬೆಂಗಳೂರು: ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದರೆ, ಇದೀಗ ತಮಿಳುನಾಡಿನಲ್ಲೂ ಸೋಂಕು ತೀವ್ರಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎನ್ನಬಹುದು. ಆದ್ದರಿಂದ ರಾಜ್ಯದಲ್ಲಿ ಈ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಡಿ.26ರಂದು ತಜ್ಞರ ಜೊತೆ ಸಭೆ ನಡೆಸಲಿದ್ದೇನೆ…

ಚಲಿಸುತ್ತಿದ್ದ ಬಸ್ಸಿನಲ್ಲಿ ಹೃದಯಾಘಾತವಾಗಿ KSRTC ನಿರ್ವಾಹಕ ಸಾವು

ಚಿಕ್ಕಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೃದಯಾಘಾತವಾಗಿ KSRTC ನಿರ್ವಾಹಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ KSRTC ನಿರ್ವಾಹಕ ವಿಜಯ್ (42) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು-ಉಡುಪಿ ಕೆಎಸ್ ಆರ್ ಟಿಸಿ…

ಅಪ್ರಾಪ್ರ ಬಾಲಕಿಯನ್ನು ಅಪಹರಿಸಿ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 95 ಸಾವಿರ ದಂಡ

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ನಾಲ್ಕು ದಿನಗಳ ಕಾಲ ಬಾಲಕಿ ಮೇಲೆ ಒತ್ತಾಯಪೂರ್ಕವಾಗಿ ಅತ್ಯಾಚಾರ ನಡೆಸಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ…

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಎರಡು ಪುಟ್ಟ ಕಂದಮ್ಮಗಳು ಮೃತ್ಯು, ದಂಪತಿ ಗಂಭೀರ

ಹಾಸನ: ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಂಪತಿಗಳಿಬ್ಬರು ಗಂಭೀರ ಗಾಯಗೊಂಡು ಪುಟ್ಟ ಅವಳಿ ಮಕ್ಕಳಿಬ್ಬರು ಸ್ಥಳದಲ್ಲಿಯೇ ದಾರುಣ ಮೃತಪಟ್ಟ ಘಟನೆ ಹಾಸನ ಸಮೀಪ ನಡೆದಿದೆ. ಮೃತ ಅವಳಿ ಮಕ್ಕಳನ್ನು ಪ್ರಣತಿ(3ವರ್ಷ) ಪ್ರಣವ್(3ವರ್ಷ) ಎಂದು ತಿಳಿದು ಬಂದಿದೆ. ಶಿವಾನಂದ್…

error: Content is protected !!