ಹೆಚ್ಚಿದ ಒಮೈಕ್ರಾನ್ ಸೋಂಕು: ನಾಳೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಿರುವ ಸಿ.ಎಂ ಬೊಮ್ಮಾಯಿ!
ಬೆಂಗಳೂರು: ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದರೆ, ಇದೀಗ ತಮಿಳುನಾಡಿನಲ್ಲೂ ಸೋಂಕು ತೀವ್ರಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎನ್ನಬಹುದು. ಆದ್ದರಿಂದ ರಾಜ್ಯದಲ್ಲಿ ಈ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಡಿ.26ರಂದು ತಜ್ಞರ ಜೊತೆ ಸಭೆ ನಡೆಸಲಿದ್ದೇನೆ…