ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್; ಚಾಲಕ ಸೇರಿ ಒಂಬತ್ತು ಮಂದಿ ಸಾವು
ಅಮರಾವತಿ: ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಬುಧವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನದಿಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ತೆಲಂಗಾಣದ ಅಶ್ವರಾವ್‌ಪೇಟೆಯಿಂದ…