ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್: ಅನಿಲ್ ಕುಂಬ್ಳೆ ಸಾಧನೆ ಸರಿಗಟ್ಟಿದ ಎಜಾಜ್ ಪಟೇಲ್
ಮುಂಬೈ: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶನಿವಾರ ನ್ಯೂಜಿಲೆಂಡ್ ತಂಡದ ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದ ಸಾಧನೆ ಮಾಡಿದರು. ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಅವರು ಅಪರೂಪದ ಸಾಧನೆ ಮಾಡಿದರು.…