dtvkannada

Month: January 2022

6 ತಿಂಗಳಿಂದ ಆರೋಗ್ಯ ಇಲಾಖೆಯ ಸರ್ಕಾರಿ ಅಧಿಕಾರಿಯ ವೇತನ ತಡೆ ಹಿಡಿದ ಆರೋಗ್ಯ ಇಲಾಖೆ!?

ಮಂಗಳೂರು: ಮಂಗಳೂರಿನ ಆರೋಗ್ಯ ಇಲಾಖೆಯ ಸರ್ಕಾರಿ ಅಧಿಕಾರಿಗೆ ಕಳೆದ 6 ತಿಂಗಳಿಂದ ವೇತನ ನೀಡದೇ ಸತಾಯಿಸುತ್ತಿದ್ದುದನ್ನು ಖಂಡಿಸಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪ್ರತಿಭಟನೆ ನಡೆಸಿದ ವ್ಯಕ್ತಿ ಜಲೀಲ್‌ ಇಬ್ರಾಹಿಂ ಎಂಬುವವರು ಮಂಗಳೂರು ನಗರ…

ಮಂಗಳೂರು: ಕಾಂಗ್ರೆಸ್ ಕಛೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು; ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಮಂಗಳೂರು: ಮಂಗಳೂರಿನ ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ.ಪಂಜಾಬ್ ನಲ್ಲಿ ಪ್ರಧಾನಿ ಮೋದಿಗೆ ಭದ್ರತೆ ಒದಗಿಸದ ಅಲ್ಲಿನ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳೂರಿನ ಕಾಂಗ್ರೆಸ್ ಕಛೇರಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ…

ಕುಂದಾಪುರ: ಚಿನ್ನಾಭರಣ ಕಳ್ಳತನ- ಇಬ್ಬರು ಅಂತರಾಜ್ಯ ಕುಖ್ಯಾತ ಕಳ್ಳರ ಬಂಧನ

ಕುಂದಾಪುರ: ಯುವ ಮೆರಿಡಿಯನ್‌ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆಯುತ್ತಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್‌ ರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ಧನರಾಜ್‌…

ಪಾಟ್ರಕೋಡಿ ಮೊಹಿಯುದ್ದೀನ್ ಜುಮಾ ಮಸೀದಿಯ ವಾರ್ಷಿಕ ಮಹಾಸಭೆ

ಪುತ್ತೂರು: ಕೆದಿಲ ಗ್ರಾಮದ ಮೊಹ್ಯುದ್ದಿನ್ ಜುಮ್ಮಾ ಮಸೀದಿ ಪಾಟ್ರಕೊಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಇಸುಬು ಕೆ.ಎಸ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಹಮೀದ್ ಹಾಜಿ ಕೊಡಿ, ಪ್ರಧಾನ ಕಾರ್ಯದರ್ಶಿಯಾಗಿ ತಸ್ರೀಫ್, ಕೋಶಾಧಿಕಾರಿಯಾಗಿ ಉಮರ್ ಕರಿಮಜಲು ಆಯ್ಕೆಯಾದರು.…

ನಾನು, ಡಿಕೆಶಿ,ರಾಮಲಿಂಗ ರೆಡ್ಡಿ ದೃವನಾರಾಯಣ್ ಸೇರಿ ನಾಲ್ಕೇ ಮಂದಿ ನಡೆದುಕೊಂಡು ಹೋಗುತ್ತೇವೆ ಆಗಲೂ ತಡೆಯುತ್ತೀರಾ?-ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ರಾಜ್ಯ ಸರ್ಕಾರ ಮೇಕೆದಾಟು ಪಾದಯಾತ್ರೆಯನ್ನು ತಡೆಯುವ ಉದ್ದೇಶದಿಂದಲೇ ವೀಕೆಂಡ್ ಕರ್ಫ್ಯೂ ಹೇರಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಪ್ರತಿಭಟನೆಯನ್ನು ನಿಲ್ಲಿಸಲು ಸೆಕ್ಷನ್ ಹೇರಲು ಮುಂದಾಗಿದೆ, ಒಂದುವೇಳೆ ಸೆಕ್ಷನ್ ಹೇರಿದರೆ ಐದು…

ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆ; ನೂತನ ಮಾರ್ಗಸೂಚಿ ಪ್ರಕಟಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಮಂಗಳೂರು: ಕೊರೋನ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಕಾರಣ ರಾಜ್ಯ ಸರಕಾರ ಹೊರಡಿಸಿರುವ ವಾರಾಂತ್ಯ ಕರ್ಫ್ಯೂ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5ರವರೆಗೆ ಇರಲಿದೆ.…

ಪುತ್ತೂರಿಗೆ ಅಲ್ಪಸಂಖ್ಯಾತ ರಾಜ್ಯ ಅಭಿವ್ರದ್ಧಿ ನಿಗಮದ ಅಧ್ಯಕ್ಷರ ಬೇಟಿ; ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಪುತ್ತೂರು: 03 ಜನವರಿ 2022 ರಂದು ಅಲ್ಪಸಂಖ್ಯಾತ ಅಬಿವ್ರದ್ಧಿ ನಿಗಮದ ರಾಜ್ಯ ಅದ್ಯಕ್ಷರಾದ ಜನಾಬ್ ಮುಕ್ತಾರ್ ಹುಸೇನ್ ಫಕ್ರುದ್ದೀನ್ ಪಾಠಾಣ್ ಪುತ್ತೂರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ ನಡೆಸಿದರು. ಅಧ್ಯಕ್ಷರೊಂದಿಗೆ ನಿಗಮದ ರಾಜ್ಯ ನಿರ್ದೇಶಕರಾದ…

ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ ಪಾಪಿ ಪತ್ನಿ; ಮೂವರು ಬಂಧನ

ಹಾಸನ: ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್ ಆಗಿದ್ದಾಳೆ. ಯಸಳೂರು ಪೊಲೀಸರು ಪತ್ನಿ ಶ್ರುತಿ ಮತ್ತು ಆಕೆಯ ಪ್ರಿಯಕರನನ್ನ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮರಡಿಕೆರೆ ಗ್ರಾಮದ ಬಳಿ ಡಿ.26ರಂದು ಸಂತೋಷ್(29) ಶವ ಸಿಕ್ಕಿತ್ತು. ಕೆಲಸ…

ಪುತ್ತೂರು: ಮುಕ್ವೆ ಬಳಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ; ಆಸ್ಪತ್ರೆಗೆ ದಾಖಲು

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಮುಕ್ವೆ ಎಂಬಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಬೈಕ್’ಗೆ ಏಕಾಏಕಿ ಆಕ್ಟಿವಾ ವಾಹನ ಅಡ್ಡ ಬಂದ ಪರಿಣಾಮ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ…

ತರಗತಿಗೆ ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಗಳಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. ಕೆಲವು ವಿದ್ಯಾರ್ಥಿಗಳು ಸೋಮವಾರ ಕೇಸರಿ…

error: Content is protected !!